alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಮರಾದಲ್ಲಿ ಸೆರೆಯಾಗಿದೆ ಮೃತ ಶರೀರದ ಆತ್ಮ

soul-kentuckyಸಾಮಾಜಿಕ ತಾಣದಲ್ಲಿ ಹರಿದಾಡುತ್ತಿರುವ ಫೋಟೊವೊಂದು ಹಲವು ಜಿಜ್ಞಾಸೆಗಳನ್ನು ಹುಟ್ಟು ಹಾಕಿದೆ. ಮೃತ ದೇಹದ ಆತ್ಮ, ತೇಲಿ ಹೋಗುತ್ತಿರುವ ಚಿತ್ರ ಇದಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಅಮೆರಿಕಾದ ಕೆಂಟುಕಿಯಲ್ಲಿ ನಡೆದ ಮೋಟಾರ್ ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಪಕ್ಕದ ರಸ್ತೆಯಲ್ಲಿ ಸಂಚರಿಸುತ್ತಿದ್ದವರೊಬ್ಬರು ತಮ್ಮ ಕ್ಯಾಮರಾದಲ್ಲಿ ಅಪಘಾತದ ಫೋಟೋ ತೆಗೆದುಕೊಂಡಿದ್ದರು.

ಈ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಫೋಟೋದಲ್ಲಿ ಮನುಷ್ಯಾಕೃತಿಯ ನೆರಳೊಂದು ಅಪಘಾತ ನಡೆದ ಸ್ಥಳದಿಂದ ಮೇಲೆ ಹೋಗುತ್ತಿರುವುದನ್ನು ಕಾಣಬಹುದಾಗಿದೆ. ದೆವ್ವ, ಭೂತ, ಆತ್ಮದ ಇರುವಿಕೆ ಎಷ್ಟು ನಿಜವೋ ಸುಳ್ಳೋ ಗೊತ್ತಿಲ್ಲ. ಆದರೆ ಫೋಟೋ ಮಾತ್ರ ಕುತೂಹಲವನ್ನು ಹುಟ್ಟು ಹಾಕಿರುವುದಂತೂ ನಿಜ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...