alex Certify
ಕನ್ನಡ ದುನಿಯಾ       Mobile App
       

Kannada Duniya

ನಾಡಗೀತೆಯ ಇತಿಹಾಸ

ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆ ನಮ್ಮ ನಾಡಗೀತೆ. ಕೆ. ವಿ. ಪುಟ್ಟಪ್ಪ ಅವರು ಇದನ್ನು 1924 ರಲ್ಲಿ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದಿದ್ದರು. 2004ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

ರಾಷ್ಟ್ರಕವಿ ಕುವೆಂಪು ರಚಿಸಿದ ‘ಜಯ ಭಾರತ ಜನನಿಯ ತನುಜಾತೆ’ ಕವನವು ಅವರ ಕೈಯಲ್ಲೇ ಮುಂದೆ ಸಣ್ಣಪುಟ್ಟ ಮಾರ್ಪಾಡು­ಗಳನ್ನು ಪಡೆಯಿತು. 2004 ರ ಫೆ. 23 ರಂದು ರಾಜ್ಯ ಸರ್ಕಾರ ಅದನ್ನು ‘ನಾಡಗೀತೆ’ಯಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.

ನಾಡಗೀತೆಗೆ ಮೊಟ್ಟ ಮೊದಲ ಬಾರಿಗೆ ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆ ಮಾಡಿದರು. ನಂತರದ ದಿನಗಳಲ್ಲಿ ಸಿ. ಅಶ್ವತ್ಥ್ ಅವರ ರಾಗ ಸಂಯೋಜನೆ ಜನಪ್ರಿಯತೆ ಗಳಿಸಿತು.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...