alex Certify
ಕನ್ನಡ ದುನಿಯಾ       Mobile App
       

Kannada Duniya

ಕಣ್ಣು ಕಳೆದುಕೊಂಡವನಿಗೆ 17 ವರ್ಷಗಳ ಬಳಿಕ ಸಿಕ್ತು ನ್ಯಾಯ

judgement-08764ಭಾರತದಲ್ಲಿ ನ್ಯಾಯದಾನ ಸಿಗುವುದು ವಿಳಂಬವಾಗುತ್ತಿದೆ ಎಂಬ ಮಾತಿದೆ. ಇದಕ್ಕೆ ಪೂರಕವಾದ ಪ್ರಕರಣವೊಂದು ಉತ್ತರಪ್ರದೇಶದಲ್ಲಿ ನಡೆದಿದೆ. ಜಗಳದ ವೇಳೆ ಕಣ್ಣು ಕಳೆದುಕೊಂಡಿದ್ದ ವ್ಯಕ್ತಿಗೆ ಬರೋಬ್ಬರಿ 17 ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ.

ಉತ್ತರಪ್ರದೇಶದ ಶ್ಯಾಮ್ಲಿ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಫತೇಪುರ್ ಗ್ರಾಮದ ವಿಜಯ್ ಪಾಲ್ ಎಂಬಾತ ಅದೇ ಗ್ರಾಮದ ಅವಿನಾಶ್ ಮತ್ತು ಪ್ರವೀಣ್ ಎಂಬ ಸಹೋದರರು ವಿದ್ಯುತ್ ಕಳವು ಮಾಡುತ್ತಿದ್ದಾರೆಂದು ಆರೋಪಿಸಿದ್ದ. ಇದರಿಂದ ಆಕ್ರೋಶಗೊಂಡ ಸಹೋದರರು ಜೂನ್ 16, 1999 ರಂದು ವಿಜಯ್ ಪಾಲ್ ಮೇಲೆ ಹಲ್ಲೆ ನಡೆಸಿದ್ದು, ಇದರಿಂದಾಗಿ ಆತ ತನ್ನ ಕಣ್ಣನ್ನೇ ಕಳೆದುಕೊಂಡಿದ್ದ.

ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿದ್ದ ಮುಜಫರ್ ನಗರದ ಸ್ಥಳೀಯ ನ್ಯಾಯಾಲಯ 17 ವರ್ಷಗಳ ಬಳಿಕ ಆರೋಪಿಗಳಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೇ ಇಬ್ಬರು ಆರೋಪಿಗಳಿಗೂ ತಲಾ 5 ಸಾವಿರ ರೂ. ದಂಡ ವಿಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...