alex Certify ದೀಪಾವಳಿಯ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಅಮೆರಿಕಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೀಪಾವಳಿಯ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಿದ ಅಮೆರಿಕಾ

us-diwali-stampಅಮೆರಿಕಾದ ಅಂಚೆ ಇಲಾಖೆ, ಭಾರತೀಯರ ಸಂಭ್ರಮದ ಹಬ್ಬ ದೀಪಾವಳಿಗೂ ಮುನ್ನ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡುವ ಮೂಲಕ ಅಮೆರಿಕಾದಲ್ಲಿ ನೆಲೆಸಿರುವ ಭಾರತೀಯರ ಸಡಗರ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

ದೀಪಾವಳಿ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿರುವ ಅಮೆರಿಕಾದ ಅಂಚೆ ಇಲಾಖೆ, ಅಮೆರಿಕಾದ ಅಭಿವೃದ್ದಿಗಾಗಿ ಶ್ರಮಿಸುತ್ತಿರುವ ಭಾರತೀಯರ ಕೊಡುಗೆಯನ್ನು ಪರಿಗಣಿಸಿ ಈ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದೆ.

ಈ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಹರ್ದೀಪ್ ಸಿಂಗ್ ಪುರಿ ಹಾಜರಿದ್ದರು. ತಮ್ಮ ಭಾವನೆಗಳನ್ನು ಪುರಸ್ಕರಿಸಿ ಅಮೆರಿಕಾದ ಅಂಚೆ ಇಲಾಖೆ ದೀಪಾವಳಿ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿರುವುದಕ್ಕೆ ಅಲ್ಲಿನ ಭಾರತೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...