alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ದಿನವೂ ಅಮಿತ್ ಶಾ ಭರ್ಜರಿ ಪ್ರಚಾರ

ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ಮೊದಲ ದಿನದ ಪ್ರವಾಸ ಪೂರ್ಣಗೊಳಿಸಿದ ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಹುಬ್ಬಳ್ಳಿಯಲ್ಲಿ ತಂಗಿದ್ದಾರೆ. ಇಂದು 2 ನೇ ದಿನದ ಪ್ರವಾಸ ಆರಂಭಿಸಲಿರುವ ಅವರು, ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಸ್ಮಾರಕಕ್ಕೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಮೊದಲ ದಿನ ಧಾರವಾಡ, ಗದಗ ಜಿಲ್ಲೆಗಳಲ್ಲಿ ಭೇಟಿ ನೀಡಿದ್ದ ಅಮಿತ್ ಶಾ ಇಂದು ಬೆಳಗಾವಿ, ಬಾಗಲಕೋಟೆ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಕಿತ್ತೂರಿನಲ್ಲಿ ಚೆನ್ನಮ್ಮನ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಅಲ್ಲಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಮುಧೋಳದಲ್ಲಿ ನಡೆಯುವ ಶಕ್ತಿ ಕೇಂದ್ರದ ಸಮಾವೇಶದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ ಪಕ್ಷದ ನಾಯಕ ಗೋವಿಂದ ಕಾರಜೋಳ ನಿವಾಸದಲ್ಲಿ ಭೋಜನ ಸವಿಯಲಿದ್ದಾರೆ. ಗೋಕಾಕ್ ನಲ್ಲಿ ರೋಡ್ ಶೋ ನಡೆಸಲಿದ್ದು, ನಿಪ್ಪಾಣಿಯಲ್ಲಿ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿ ಕೆ.ಎಲ್.ಇ. ಕಾಲೇಜ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ರಾತ್ರಿ ಬೆಳಗಾವಿಯಿಂದ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...