alex Certify
ಕನ್ನಡ ದುನಿಯಾ       Mobile App
       

Kannada Duniya

ಮಾರ್ಚ್ 26 ರಂದು ಶಿವಮೊಗ್ಗಕ್ಕೆ ಅಮಿತ್ ಶಾ, ಗೊಂದಲಕ್ಕೆ ತೆರೆ

ಶಿವಮೊಗ್ಗ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ, ರಾಜ್ಯಕ್ಕೆ ರಾಷ್ಟ್ರೀಯ ನಾಯಕರ ದಂಡು ಆಗಮಿಸತೊಡಗಿದೆ.

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ 3 ನೇ ಹಂತದ ಜನಾಶೀರ್ವಾದ ಯಾತ್ರೆ ಪೂರ್ಣಗೊಳಿಸಿದ ಬಳಿಕ, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಮಾಜಿ ಸಿ.ಎಂ., ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು, ಪಕ್ಷದಲ್ಲಿನ ಗೊಂದಲಗಳಿಗೆ ತೆರೆ ಎಳೆಯಲಿದ್ದಾರೆ.

ಗೊಂದಲದಲ್ಲಿ ಮುಳುಗಿರುವ ಬಿ.ಜೆ.ಪಿ. ಜಿಲ್ಲಾ ಘಟಕಕ್ಕೆ ಮೇಜರ್ ಸರ್ಜರಿ ಮಾಡಲಿದ್ದಾರೆ. ಶಿವಮೊಗ್ಗದ ಕ್ಷೇತ್ರದ ಟಿಕೆಟ್ ವಿಚಾರ ಕುರಿತಾಗಿ ಮೂಡಿರುವ ಗೊಂದಲವನ್ನು ಅವರು ನಿವಾರಿಸುವ ಸಾಧ್ಯತೆ ಇದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಾ ಅವರಿಗೆ ಹಲವು ನಿಗದಿತ ಕಾರ್ಯಕ್ರಮ ಫಿಕ್ಸ್ ಆಗಿವೆ. ರಾಷ್ಟ್ರಕವಿ ಕುವೆಂಪು ಸ್ಮಾರಕ ಸ್ಥಳ ಕವಿಶೈಲಕ್ಕೂ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಮಾರ್ಚ್ 26 ರಂದು ಅವರು ವಾಸ್ತವ್ಯ ಹೂಡಲಿದ್ದು, ಜಿಲ್ಲೆಯ ನಾಯಕರೊಂದಿಗೆ ಚರ್ಚಿಸಿ ಗೊಂದಲಗಳಿಗೆ ತೆರೆ ಎಳೆಯುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...