alex Certify
ಕನ್ನಡ ದುನಿಯಾ       Mobile App
       

Kannada Duniya

ತಡರಾತ್ರಿ ಜಫ್ತಿಯಾಯ್ತು ಬರೋಬ್ಬರಿ 4 ಕೋಟಿ ರೂ.

ಬೆಳಗಾವಿ: ವಿಧಾನಸಭೆ ಚುನಾವಣೆ ಘೋಷಣೆಯಾಗ್ತಿದ್ದಂತೆ ಹಣದ ಹೊಳೆಯೇ ಹರಿಯುತ್ತಿದೆ. ಈಗಾಗಲೇ ಚುನಾವಣಾಧಿಕಾರಿಗಳು ಅಪಾರ ಪ್ರಮಾಣದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಅದೇ ರೀತಿ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಭೈರಾಪುರ ಚೆಕ್ ಪೋಸ್ಟ್ ನಲ್ಲಿ ತಡರಾತ್ರಿ ಬರೋಬ್ಬರಿ 4 ಕೋಟಿ ರೂ. ಜಫ್ತಿ ಮಾಡಲಾಗಿದೆ. ಕೊಲ್ಹಾಪುರದಿಂದ ಗಡಹಿಂಗ್ಲಜಕ್ಕೆ ಖಾಸಗಿ ವಾಹನದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣವನ್ನು ಸಂಕೇಶ್ವರ ಠಾಣೆ ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಐ.ಟಿ. ಅಧಿಕಾರಿಗಳು ಕೂಡ ಪರಿಶೀಲನೆ ನಡೆಸಿದ್ದಾರೆ.

ಹಣ, ವಾಹನ ಜಫ್ತಿ ಮಾಡಲಾಗಿದ್ದು, ಹಣ ಸಾಗಿಸುತ್ತಿದ್ದ ಬ್ಯಾಂಕ್ ಒಂದರ ಪ್ರತಿನಿಧಿಗಳಾಗಿರುವ ಡಿ.ಡಿ. ಕೇರ್ಲೆ ಹಾಗೂ ವಿಜಯ ನಾಯ್ಕ್ ಅವರ ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...