alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಬೇಳೂರು ಗೋಪಾಲಕೃಷ್ಣ ಸ್ಪರ್ಧೆ

ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸ್ಪರ್ಧಿಸಲಿದ್ದಾರೆ.

ಬಿ.ಜೆ.ಪಿ. ಟಿಕೆಟ್ ಗಾಗಿ ಮಾಜಿ ಸಚಿವ ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲ ಕೃಷ್ಣ ತೀವ್ರ ಪೈಪೋಟಿ ನಡೆಸಿದ್ದರು. ಒಮ್ಮೆ ಬೇಳೂರು ಗೋಪಾಲಕೃಷ್ಣರಿಗೆ ಟಿಕೆಟ್, ಮತ್ತೊಮ್ಮೆ ಹರತಾಳು ಹಾಲಪ್ಪರಿಗೆ ಟಿಕೆಟ್ ಎಂಬ ಗೊಂದಲ ಮೂಡಿತ್ತು.

ಅಂತಿಮವಾಗಿ ಹರತಾಳು ಹಾಲಪ್ಪರಿಗೆ ಟಿಕೆಟ್ ನೀಡಿರುವ ಹಿನ್ನಲೆಯಲ್ಲಿ ಬೇಳೂರು ಗೋಪಾಲಕೃಷ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಂಬಲಿಗರ ಸಭೆಯನ್ನು ನಡೆಸಿರುವ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಏಪ್ರಿಲ್ 22 ರಂದು ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಸಾಗರದಲ್ಲಿ ಸಚಿವ ಕಾಗೋಡು ತಿಮ್ಮಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ಹರತಾಳು ಹಾಲಪ್ಪ ಬಿ.ಜೆ.ಪಿ. ಅಭ್ಯರ್ಥಿಯಾಗಿದ್ದಾರೆ. ಬೇಳೂರು ಗೋಪಾಲಕೃಷ್ಣ ಕೂಡ ಸ್ಪರ್ಧಿಸುತ್ತಿರುವುದರಿಂದ ಚುನಾವಣಾ ಕಣ ರಂಗೇರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...