alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಗ್ ಬ್ರೇಕಿಂಗ್: ಆರ್.ಆರ್. ನಗರ ಚುನಾವಣೆ ಮುಂದೂಡಿಕೆ

ಬೆಂಗಳೂರು: ಮತದಾರರ ಗುರುತಿನ ಚೀಟಿ ಅಕ್ರಮವಾಗಿ ಸಂಗ್ರಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿದೆ.

ವಿಧಾನಸಭೆ ಚುನಾವಣೆ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವ ಸಂದರ್ಭದಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಯನ್ನು ಮುಂದೂಡಬೇಕೆಂದು ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ನಿಂದ ಒತ್ತಾಯಿಸಲಾಗಿತ್ತು.

ಮೇ 28 ರಂದು ಆರ್.ಆರ್. ನಗರ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯಲಿದ್ದು, ಮೇ 31 ರಂದು ಮತ ಎಣಿಕೆ ನಡೆಯಲಿದೆ.

ರಾಜರಾಜೇಶ್ವರಿ ನಗರದ ಅಪಾರ್ಟ್ ಮೆಂಟ್ ನಲ್ಲಿ ಸುಮಾರು 9000 ಮತದಾರರ ಗುರುತಿನ ಚೀಟಿಯನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು. ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರು 11 ನೇ ಆರೋಪಿಯಾಗಿದ್ದಾರೆ.

ಈ ಪ್ರಕರಣ ದೇಶಾದ್ಯಂತ ಸುದ್ದಿಯಾಗಿದ್ದು, ಭಾರೀ ಅಕ್ರಮದ ಹಿನ್ನಲೆಯಲ್ಲಿ ಚುನಾವಣೆ ಮುಂದೂಡಲು ಒತ್ತಾಯ ಕೇಳಿ ಬಂದಿತ್ತು. ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಮುಂದೂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...