alex Certify
ಕನ್ನಡ ದುನಿಯಾ       Mobile App
       

Kannada Duniya

2 ದಿನದಲ್ಲಿ ಬಿ.ಜೆ.ಪಿ. 150 ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬೆಂಗಳೂರು: ಕಳೆದ 4 ದಿನಗಳಿಂದ ಖಾಸಗಿ ಹೋಟೆಲ್ ನಲ್ಲಿ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ, ಅಭಿಪ್ರಾಯ ಸಂಗ್ರಹಿಸಿದ ಬಿ.ಜೆ.ಪಿ. ನಾಯಕರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.

ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಪಟ್ಟಿಯೊಂದಿಗೆ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿ.ವಿ. ಸದಾನಂದಗೌಡ ದೆಹಲಿಗೆ ಹೊರಟಿದ್ದಾರೆ.

ದೆಹಲಿಯಲ್ಲಿ ಪಕ್ಷದ ವರಿಷ್ಠರು ಪಟ್ಟಿಗೆ ಫೈನಲ್ ಟಚ್ ನೀಡಲಿದ್ದು, 2 ದಿನದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

ಈ ಕುರಿತು ಮಾಹಿತಿ ನೀಡಿದ ಬಿ.ಎಸ್. ಯಡಿಯೂರಪ್ಪ, ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಸಲಹೆ, ಅಭಿಪ್ರಾಯ ಸಂಗ್ರಹಿಸಲಾಗಿದೆ. ಪಟ್ಟಿಯನ್ನು ಸಿದ್ಧಪಡಿಸಿ ಅಮಿತ್ ಶಾ ಅವರಿಗೆ ನೀಡಲಿದ್ದು, 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು 2 ದಿನಗಳಲ್ಲಿ ಬಿಡುಗಡೆ ಮಾಡುವಂತೆ ಕೋರಲಾಗುವುದು ಎಂದು ತಿಳಿಸಿದ್ದಾರೆ.

ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೊಂದಿಗೆ ದೆಹಲಿಗೆ ಹೊರಟಿದ್ದೇವೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...