alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದೆ ಬಿ.ಜೆ.ಪಿ. 2 ನೇ ಪಟ್ಟಿ

ನವದೆಹಲಿ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಂಡಾಯ ಬಿಸಿ ಅನುಭವಿಸಿದ್ದ ಬಿ.ಜೆ.ಪಿ. ನಾಯಕರು ಇಂದು 2 ನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ.

ಈಗಾಗಲೇ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಲಾಗುವುದು.

ಕೇಂದ್ರಿಯ ಚುನಾವಣಾ ಸಮಿತಿ ಸಭೆಯ ಬಳಿಕ ಸುಮಾರು 80 ಕ್ಷೇತ್ರಗಳ ಬಿ.ಜೆ.ಪಿ. ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ತೀವ್ರ ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಆಕಾಂಕ್ಷಿಗಳಲ್ಲಿ ಢವಢವ ಶುರುವಾಗಿದೆ.

ವರುಣಾ ಕ್ಷೇತ್ರದಲ್ಲಿ ಬಿ.ಎಸ್.ವೈ. ಪುತ್ರ ವಿಜಯೇಂದ್ರ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿರಲಿಲ್ಲ. 2 ನೇ ಪಟ್ಟಿಯಲ್ಲಿ ಅವರಿಗೆ ಅವಕಾಶ ಸಿಗಲಿದೆ. ಸಾಗರ ಕ್ಷೇತ್ರಕ್ಕೆ ಹರತಾಳು ಹಾಲಪ್ಪ ಇಲ್ಲವೇ ಬೇಳೂರು ಗೋಪಾಲಕೃಷ್ಣ ಅವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...