alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಪ್ರಣಾಳಿಕೆಯಲ್ಲಿ ಭರಪೂರ ಭರವಸೆ

1 ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ, ಕೃಷಿಗೆ 10 ಗಂಟೆ ವಿದ್ಯುತ್, ಮರಳು ಮಾಫಿಯಾಕ್ಕೆ ಬ್ರೇಕ್ -ಇವೇ ಮೊದಲಾದ ವಿಷಯಗಳನ್ನೊಳಗೊಂಡ ಬಿ.ಜೆ.ಪಿ. ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಲಾಗಿದೆ.

ಸ್ತ್ರೀಶಕ್ತಿ ಸಂಘಗಳಿಗೆ ಸಾಲ, ನೀರಾವರಿಗೆ ಒಂದೂವರೆ ಲಕ್ಷ ಕೋಟಿ ಅನುದಾನ, ಎ.ಸಿ.ಬಿ. ರದ್ದುಗೊಳಿಸಿ ಲೋಕಾಯುಕ್ತಕ್ಕೆ ಪೂರ್ಣ ಅಧಿಕಾರ, ಸಹಕಾರಿ ಸಂಘಗಳು, ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ, ಒಣಭೂಮಿ ಹೊಂದಿರುವ 20 ಲಕ್ಷ ರೈತರಿಗೆ ಸಹಾಯಧನ, ಬೆಳೆಗೆ ಬೆಂಬಲ ಬೆಲೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.

ರೈತರಿಗೆ ಅಪಘಾತ ವಿಮೆ, ರೈತರ ಮಕ್ಕಳಿಗೆ ಶಿಕ್ಷಣಕ್ಕೆ ನೆರವು, ಪ್ರತಿ ಜಿಲ್ಲೆ 3 ತಾಲ್ಲೂಕುಗಳಲ್ಲಿ ಅನ್ನಪೂರ್ಣ ಕ್ಯಾಂಟೀನ್, ಬಿ.ಪಿ.ಎಲ್. ಕುಟುಂಬದ ಹೆಣ್ಣುಮಕ್ಕಳಿಗೆ 3 ಗ್ರಾಂ ಚಿನ್ನ, 25,000 ರೂ. ನಗದು, ಗೋಹತ್ಯೆ ನಿಷೇಧ ಕಾಯ್ದೆ, ಹಾಲು ಉತ್ಪಾದಕರಿಗೆ ನೆರವು, ರೇಷ್ಮೆ ಬೆಳೆಗಾರರಿಗೆ ನೆರವು ಹೀಗೆ ಹಲವು ಭರವಸೆ ಒಳಗೊಂಡ ‘ನಮ್ಮ ಕರ್ನಾಟಕಕ್ಕೆ ನಮ್ಮ ವಚನ’ ಹೆಸರಿನ ಪ್ರಣಾಳಿಕೆಯನ್ನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕೇಂದ್ರಸಚಿವರು ಇದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...