alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ.ಗೆ ಅಧಿಕಾರ ಕೊಡಿ, ಪ್ರತಿ ಪೈಸೆಗೂ ಲೆಕ್ಕ ಕೊಡ್ತೀನಿ’

ಬಿ.ಜೆ.ಪಿ.ಯನ್ನು ಬೆಂಬಲಿಸಿ ಅಧಿಕಾರಕ್ಕೆ ತನ್ನಿ, ಪ್ರತಿ ಪೈಸೆಗೂ ಲೆಕ್ಕ ಕೊಡುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಮಾತನಾಡಿದ ಅವರು, ಸ್ವಾಮಿನಾಥನ್ ವರದಿಯನ್ನು ಕಾಂಗ್ರೆಸ್ ಬೀರುವಿನಲ್ಲಿಟ್ಟಿತ್ತು. ನಾವು ಅದನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.

ಸವದತ್ತಿ ಎಲ್ಲಮ್ಮ, ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರನ್ನು ಸ್ಮರಿಸಿದ ಮೋದಿ, ಇಲ್ಲಿ ಭಾಗವಹಿಸಿರುವ ಜನರನ್ನು ನೋಡಿದ್ರೇ ಬಿ.ಜೆ.ಪಿ. ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಅವರನ್ನು ಈ ನೆಲ ಆಕರ್ಷಿಸಿತ್ತು. ಆದರೆ, ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿತ್ತು. ನೆಹರೂ ಪ್ರಧಾನಿಯಾಗಿ ಅಂಬೇಡ್ಕರ್ ಅವರನ್ನು ಸೋಲಿಸಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ.

ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಭಾರತ ರತ್ನ ನೀಡಲಿಲ್ಲ ಎಂದು ಟೀಕಿಸಿದ ಅವರು, ಕರ್ನಾಟಕದ ಮುಖ್ಯಮಂತ್ರಿಗಳು ನಿದ್ದೆ ಮಾಡ್ತಾರೆ. ಅವರಿಂದ ಅಭಿವೃದ್ಧಿ ಸಾಧ್ಯವಿಲ್ಲ. ರಾಜ್ಯದ ಅಭಿವೃದ್ಧಿಗೆ ಬಿ.ಜೆ.ಪಿ.ಯನ್ನು ಬೆಂಬಲಿಸಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...