alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಸಿದ್ದರಾಮಯ್ಯಗೆ ಸೇಫಲ್ಲ ಚಾಮುಂಡೇಶ್ವರಿ ಕ್ಷೇತ್ರ?

ವಿಧಾನಸಭೆ ಚುನಾವಣೆ ಕಾವು ಏರತೊಡಗಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.

ಈಗಾಗಲೇ ಭರ್ಜರಿ ಪ್ರಚಾರ ನಡೆಸಿರುವ ಸಿ.ಎಂ., ತಮ್ಮ ಕೊನೆಯ ಚುನಾವಣೆ ಇದಾಗಿದ್ದು, ಚಾಮುಂಡೇಶ್ವರಿ ಮತದಾರರು ಆಶೀರ್ವದಿಸಬೇಕೆಂದು ಮನವಿ ಮಾಡಿದ್ದಾರೆ. ಸಿ.ಎಂ. ಸೋಲಿಸಲು ಪ್ರತಿಪಕ್ಷಗಳ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

ಇದೇ ವೇಳೆ ಗುಪ್ತಚರ ಇಲಾಖೆ ಮಾಹಿತಿ ಸಿ.ಎಂ. ಕೈ ಸೇರಿದ್ದು, ಚಾಮುಂಡೇಶ್ವರಿ ಕ್ಷೇತ್ರ ಸೇಫ್ ಅಲ್ಲ ಎಂಬ ಮಾಹಿತಿ ಗೊತ್ತಾಗಿದೆ ಎನ್ನಲಾಗಿದೆ. ವರುಣಾ ಕ್ಷೇತ್ರ, ಬೆಂಗಳೂರಿನ ಶಾಂತಿನಗರ, ಬೀದರ್ ಜಿಲ್ಲೆಯ ಬಸವಕಲ್ಯಾಣ, ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಕಣಕ್ಕಿಳಿಯುವುದು ಸೂಕ್ತವೆಂದು ವರದಿಯಲ್ಲಿ ಹೇಳಲಾಗಿದೆ.

ಈ ಹಿನ್ನಲೆಯಲ್ಲಿ ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಸೂಕ್ತವಾದ ಮತ್ತೊಂದು ಕ್ಷೇತ್ರದಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...