alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ., ಯೋಗೇಶ್ವರ್ ಮಣಿಸಲು ಸಿ.ಎಂ. ಮಾಸ್ಟರ್ ಪ್ಲಾನ್

ವಿಧಾನಸಭೆ ಚುನಾವಣೆಯ ಕಾವು ಏರತೊಡಗಿದ್ದು, ಘಟಾನುಘಟಿಗಳ ಕ್ಷೇತ್ರದಲ್ಲಿ ಪೈಪೋಟಿ ಜೋರಾಗಿದೆ. ಜೆ.ಡಿ.ಎಸ್. ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಸ್ಪರ್ಧಿಸಲಿದ್ದಾರೆ.

ಚನ್ನಪಟ್ಟಣದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್, ಜೆ.ಡಿ.ಎಸ್. ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದು, ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ.

ಈ ಕ್ಷೇತ್ರದಲ್ಲಿ ಸಚಿವ ಹೆಚ್.ಎಂ. ರೇವಣ್ಣ ಅವರನ್ನು ಕಣಕ್ಕಿಳಿಸಲು ಸಿ.ಎಂ. ಸಿದ್ಧರಾಮಯ್ಯ ಚಿಂತಿಸಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ಹೆಚ್.ಎಂ. ರೇವಣ್ಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್ ಕೇಂದ್ರಿಯ ಚುನಾವಣಾ ಸಮಿತಿ ಅನುಮೋದನೆಗೆ ಕಳಿಸಲಾಗಿದೆ.

ರೇವಣ್ಣ ಸ್ಪರ್ಧಿಸಿದಲ್ಲಿ ಚನ್ನಪಟ್ಟಣದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಹೆಚ್.ಡಿ. ಕುಮಾರಸ್ವಾಮಿ ಮತ್ತು ಸಿ.ಪಿ. ಯೋಗೇಶ್ವರ್ ಹಾಗೂ ಹೆಚ್.ಎಂ. ರೇವಣ್ಣ ಅವರ ಸ್ಪರ್ಧೆಯಿಂದ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...