alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕ್ಕಬಳ್ಳಾಪುರದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ, ಸಿಡಿಲಿಗೆ ಇಬ್ಬರು ಬಲಿ

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ.

ಬಾಗೇಪಲ್ಲಿ ತಾಲ್ಲೂಕು ರಾಮನೊಡ್ಡಂಪಲ್ಲಿಯಲ್ಲಿ ಸದಾಶಿವ(45), ನರಸಿಂಹಪ್ಪ(70) ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಗಂಗಮ್ಮ ದೇಗುಲದ ಬಳಿ ಕಟ್ಟೆಯ ಮೇಲೆ ಕುಳಿತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಇಬ್ಬರೂ ಮೃತಪಟ್ಟಿದ್ದಾರೆ. ಬಾಗೇಪಲ್ಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಜಿಲ್ಲೆಯ ಹಲವೆಡೆ ರಾಶಿ ರಾಶಿ ಆಲಿಕಲ್ಲು ಬಿದ್ದಿವೆ. ಮಂಡಿಕಲ್ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಸುರಿದ ಮಳೆಗೆ ದ್ರಾಕ್ಷಿ, ಹೂವು, ಹಣ್ಣಿನ ತೋಟಗಳಿಗೆ ಹಾನಿಯಾಗಿದೆ. ಭಾರೀ ಮಳೆಯಿಂದಾಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...