alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರದ ವೇಳೆ ಡ್ಯಾನ್ಸ್, ಕೈ ಹಾಕಿದ ಕಾಮುಕರು

ಚಿಕ್ಕಬಳ್ಳಾಪುರ: ಚುನಾವಣೆಯಲ್ಲಿ ಜನರನ್ನು ಸೆಳೆಯಲ ಏನೆಲ್ಲಾ ಮಾಡುತ್ತಾರೆ ಎಂಬುದು ತಿಳಿದೇ ಇದೆ. ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಸಮೀಪದ ವರ್ಲಕೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮದಲ್ಲಿ ತೃತೀಯ ಲಿಂಗಿಗಳನ್ನು ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಾಂಗ್ರೆಸ್ ಮುಖಂಡರು ಪ್ರಚಾರ ಕೈಗೊಂಡಿದ್ದು, ಅವರು ಬರುವ ಮೊದಲು ತೃತೀಯ ಲಿಂಗಿಗಳಿಂದ ರಸ್ತೆಯಲ್ಲೇ ಡ್ಯಾನ್ಸ್ ಮಾಡಿಸಲಾಗಿದೆ.

ಜನರನ್ನು ಹಿಡಿದಿಟ್ಟುಕೊಳ್ಳುವ ಸಲುವಾಗಿ ಹೀಗೆ ಡ್ಯಾನ್ಸ್ ಮಾಡಿಸಲಾಗಿದ್ದು, ಈ ಸಂದರ್ಭದಲ್ಲಿ ಕೆಲವರು ಅವರ ಎದೆಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾರೆ. ಇದನ್ನು ಅಲ್ಲಿದ್ದವರು ಸೆರೆ ಹಿಡಿದಿದ್ದು ಎಲ್ಲೆಡೆ ವಿಡಿಯೋ ಹರಿದಾಡುತ್ತಿದೆ. ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...