alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಸಿದ್ಧರಾಮಯ್ಯ ಪರ ಪ್ರಚಾರಕ್ಕಿಳಿದ ಸೊಸೆ

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವಾಗಿ ಅವರ ಸೊಸೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ.

ರಾಕೇಶ್ ಸಿದ್ಧರಾಮಯ್ಯ ಅವರ ಪತ್ನಿ ಸ್ಮಿತಾ ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಆಲನಹಳ್ಳಿಯಲ್ಲಿ ಮತಯಾಚಿಸಿದ್ದಾರೆ.

ಆಲನಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಜೊತೆಗೂಡಿದ ಸ್ಮಿತಾ ಅವರು ಮನೆ ಮನೆಗೆ ತೆರಳಿ ಮತಯಾಚಿಸಿದ್ದಾರೆ. ಇದೇ ಮೊದಲ ಬಾರಿಗೆ ಅವರು ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಅವರಿಗೆ ಪಕ್ಷದ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಸಿದ್ಧರಾಮಯ್ಯ ಅವರ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದು, ಅಲ್ಲಿಯೂ ಸ್ಮಿತಾ ಅವರು ಪ್ರಚಾರ ನಡೆಸುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...