alex Certify
ಕನ್ನಡ ದುನಿಯಾ       Mobile App
       

Kannada Duniya

ಅಡಕತ್ತರಿಯಲ್ಲಿ ಸಿಲುಕಿದ ಸಿ.ಎಂ., ಕಾರಣ ಗೊತ್ತಾ…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಆದರೆ, ಚಾಮುಂಡೇಶ್ವರಿ ಸೇಫಲ್ಲ ಎನ್ನುವ ಕಾರಣಕ್ಕೆ ಬಾದಾಮಿಯಿಂದಲೂ ಸ್ಪರ್ಧಿಸಲು ಅವರು ತಯಾರಿ ಮಾಡಿಕೊಂಡಿದ್ದಾರೆ.

ಇದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಆಕ್ಷೇಪಿಸಿದ್ದಾರೆ. ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕ್ಷೇತ್ರ ಬದಲಾವಣೆ ಮಾಡಿದಾಗ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಈಗ ಅದೇ ರೀತಿ ಆಗಬಹುದೆಂದು ಹೇಳಿದ್ದಾರೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಕೂಡ 2 ಕ್ಷೇತ್ರಕ್ಕೆ ಪಟ್ಟು ಹಿಡಿದಿದ್ದು, ಇದನ್ನು ತಡೆಯುವ ಉದ್ದೇಶದಿಂದ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಸಿ.ಎಂ.ಗೆ ಹೈಕಮಾಂಡ್ ಸೂಚಿಸಿದೆ.

ಇದರಿಂದಾಗಿ ಸಿ.ಎಂ. ಸಿದ್ಧರಾಮಯ್ಯ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಚಾಮುಂಡೇಶ್ವರಿ ಸೇಫಾಗಿಲ್ಲ. ಬಾದಾಮಿಯಲ್ಲಿ ಮಾತ್ರ ಸ್ಪರ್ಧಿಸಿದರೆ, ಪಲಾಯನ ಮಾಡಿದ್ರು ಎನ್ನುವ ಮಾತು ಕೇಳಿ ಬರುತ್ತವೆ. ಈ ಕಾರಣಗಳಿಂದ ಸಿ.ಎಂ. ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಸಿದ್ಧರಾಮಯ್ಯ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸ್ತಾರಾ? ಇಲ್ಲವೇ 2 ಕ್ಷೇತ್ರಗಳಿಂದ ಕಣಕ್ಕಿಳಿತಾರಾ? ಇದಕ್ಕೆ ಹೈಕಮಾಂಡ್ ಒಪ್ಪಿಗೆ ಸೂಚಿಸುತ್ತಾ ಎಂಬುದು ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...