alex Certify
ಕನ್ನಡ ದುನಿಯಾ       Mobile App
       

Kannada Duniya

‘ನಾನೇ ಸಿ.ಎಂ. ಆಗಿ ಮುಂದುವರೆಯುವೆ’

ಮೈಸೂರು: ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದಲ್ಲಿ ಜಯಗಳಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕ್ಷೇತ್ರದ ವಿವಿಧ ಹಳ್ಳಿಗಳಿಗೆ ತೆರಳಿ ಇಂದು ಭರ್ಜರಿ ಪ್ರಚಾರ ನಡೆಸಿದ ಸಿ.ಎಂ., ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ರೆಸಾರ್ಟ್ ನಲ್ಲಿ ಕುಳಿತು ಬಂಡಲ್ ಗಟ್ಟಲೆ ಹಣ ಹಂಚಿಕೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿರುವುದಕ್ಕೆ ಸಿ.ಎಂ. ಗರಂ ಆಗಿದ್ದಾರೆ.

ರೆಸಾರ್ಟ್ ನಲ್ಲಿ ಕುಳಿತು ಹಣ ಹಂಚಿಕೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮಾಡುವುದನ್ನು ನನಗೆ ಅನ್ವಯಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...