alex Certify
ಕನ್ನಡ ದುನಿಯಾ       Mobile App
       

Kannada Duniya

ಬಾದಾಮಿಯಲ್ಲಿ ಸಿ.ಎಂ. ಸ್ಪರ್ಧೆ: ಶಾಸಕ ಚಿಮ್ಮನಕಟ್ಟಿ ಹೇಳಿದ್ದೇನು…?

ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಜೊತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ. ಆದರೆ, ಬಾದಾಮಿ ಕ್ಷೇತ್ರವನ್ನು ಸಿ.ಎಂ.ಗೆ ಬಿಟ್ಟುಕೊಡಲು ಶಾಸಕ ಚಿಮ್ಮನಕಟ್ಟಿ ವಿರೋಧ ವ್ಯಕ್ತಪಡಿಸಿದ್ದು, ತಾವೇ ಸ್ಪರ್ಧಿಸುವುದಾಗಿ ಪಕ್ಷದ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಚಿಮ್ಮನಕಟ್ಟಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾದಲ್ಲಿ ಸ್ವಇಚ್ಛೆಯಿಂದ ಕ್ಷೇತ್ರವನ್ನು ಬಿಟ್ಟುಕೊಡುತ್ತೇನೆ. ಅವರ ಗೆಲುವಿಗೆ ಶ್ರಮಿಸುತ್ತೇನೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಬೇಕಿದೆ ಎಂದು ಹೇಳಿದ್ದಾರೆ.

ನಾನು 6 ಬಾರಿ ಶಾಸಕನಾಗಿ, 2 ಸಲ ಸಚಿವನಾಗಿದ್ದೇನೆ. ಸಿದ್ಧರಾಮಯ್ಯ ಅವರು ಬಾದಾಮಿಯಿಂದ ಸ್ಪರ್ಧಿಸಿದಲ್ಲಿ ಯಾವುದೇ ಷರತ್ತಿಲ್ಲದೇ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...