alex Certify
ಕನ್ನಡ ದುನಿಯಾ       Mobile App
       

Kannada Duniya

ವಿದೇಶಕ್ಕೆ ರಾಹುಲ್, ಎಲ್ಲಾ ಕ್ಷೇತ್ರಕ್ಕೂ ಅಭ್ಯರ್ಥಿಗಳು ಫೈನಲ್

ನವದೆಹಲಿ: ಸರಣಿ ಸಭೆಗಳನ್ನು ನಡೆಸಿದ್ರೂ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗ್ತಿದೆ.

ಬೆಂಗಳೂರಿನಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದ ನಾಯಕರು, ದೆಹಲಿಯಲ್ಲಿ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದಾರೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪಕ್ಷದ ನಾಯಕರಲ್ಲಿ ಒಮ್ಮತ ಮೂಡುತ್ತಿಲ್ಲ.

ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಪಟ್ಟು ಹಿಡಿದಿದ್ದಾರೆ. ಅಭ್ಯರ್ಥಿಗಳ ಆಯ್ಕೆಗಾಗಿ 5 ದಿನಗಳಿಂದ ಸಭೆ ನಡೆಸಿದ್ದು, ಇಂದು ರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗುವ ಸಾಧ್ಯತೆ ಇದೆ.

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ನಾಳೆಯಿಂದ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಇಂದೇ ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು. ರಾತ್ರಿಯೇ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...