alex Certify
ಕನ್ನಡ ದುನಿಯಾ       Mobile App
       

Kannada Duniya

2 ಕ್ಷೇತ್ರಗಳ ಪೀಕಲಾಟ, 136 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಅಳೆದು ತೂಗಿ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು 4-5 ದಿನಗಳಿಂದ ನಿರಂತರವಾಗಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಪಟ್ಟಿಗೆ ಅಂತಿಮ ಟಚ್ ನೀಡಿದ್ದಾರೆ.

ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿ.ಎಂ. 2 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ವಿಚಾರವಾಗಿ ಆಕ್ಷೇಪಿಸಿದ್ದಾರೆ. ಹಿಂದೆ ಎಸ್.ಎಂ. ಕೃಷ್ಣ ಕ್ಷೇತ್ರ ಬದಲಿಸಿದ್ದ ಸಂದರ್ಭದಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಅಲ್ಲದೇ, ವೀರಪ್ಪಮೊಯ್ಲಿ ಅವರು, ಕಾಂಗ್ರೆಸ್ ಸದಸ್ಯತ್ವವನ್ನೇ ಪಡೆಯದ ಬಾಗೂರು ಮಂಜೇಗೌಡರಿಗೆ ಟಿಕೆಟ್ ನೀಡುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಟಿಕೆಟ್ ಹಂಚಿಕೆಯಲ್ಲಿ ಆಪ್ತರಿಗೆ ಅವಕಾಶ ಕೊಡಿಸಲು ಸಿ.ಎಂ. ಸಿದ್ಧರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಪಟ್ಟು ಹಿಡಿದಿದ್ದು, ಯಾರ ಕೈ ಮೇಲಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಸಿದ್ಧರಾಮಯ್ಯ 2 ಕ್ಷೇತ್ರದಲ್ಲಿ ಸ್ಪರ್ಧಿಸಿದಲ್ಲಿ ತಮಗೂ 2 ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಪರಮೇಶ್ವರ್ ಪಟ್ಟು ಹಿಡಿದಿದ್ದಾರೆ. ಇದು ಹೈಕಮಾಂಡ್ ಗೆ ತಲೆ ನೋವಾಗಿದೆ. ಅಲ್ಲದೇ ತಾವು ಹೇಳಿದವರಿಗೆ ಟಿಕೆಟ್ ನೀಡದಿದ್ದರೆ, ಸೋಲಿಗೆ ತಮ್ಮನ್ನು ಹೊಣೆ ಮಾಡದಂತೆ ಸಿ.ಎಂ. ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ಇದೆಲ್ಲಾ ಬೆಳವಣಿಗೆಗಳ ನಡುವೆಯೇ ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ನಡೆಯಲಿರುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ನೀಡಲಾಗುವುದು. ಅನುಮೋದನೆ ಬಳಿಕ 136 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...