alex Certify
ಕನ್ನಡ ದುನಿಯಾ       Mobile App
       

Kannada Duniya

ಜಾಲತಾಣದಲ್ಲಿ ಹರಿದಾಡ್ತಿದೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ

ವಿಧಾನಸಭೆ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ. ದೆಹಲಿಯಲ್ಲಿ ಪಕ್ಷದ ನಾಯಕರು ಅಳೆದು, ತೂಗಿ ಪಕ್ಷದ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತಾಗಿರುವಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಹರಿದಾಡಿದೆ.

ರಾಜ್ಯದ ಎಲ್ಲಾ ಕ್ಷೇತ್ರಗಳು ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಪಟ್ಟಿಯಲ್ಲಿ ಹೆಸರಿಸಲಾಗಿದೆ. ಪಕ್ಷದಿಂದ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮೊದಲೇ ಅಭ್ಯರ್ಥಿಗಳ ಪಟ್ಟಿ ಹರಿದಾಡುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇದು ಗಮನಕ್ಕೆ ಬರುತ್ತಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ. ಪಕ್ಷದ ಕೇಂದ್ರ ಸಮಿತಿ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿಲ್ಲ. ಪಕ್ಷದಿಂದ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಸುಳ್ಳು ವದಂತಿಗಳಿಗೆ ಕಿವಿಡಗೊಡಬೇಡಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...