alex Certify
ಕನ್ನಡ ದುನಿಯಾ       Mobile App
       

Kannada Duniya

‘ಹೈಕಮಾಂಡ್ ನಮ್ಮ ಮನೆ ಬಾಗಿಲಿಗೇ ಟಿಕೆಟ್ ಕಳಿಸುತ್ತೆ’

ಸಚಿವ ಸ್ಥಾನ ಹೋದ್ರೆ ವಿಮಾನದಲ್ಲಿ ಊರಿಗೆ ಹೋಗ್ತೇನೆ ಎಂದು ಹಿಂದೆ ಹೇಳಿದ್ದ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರು, ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ವಯಸ್ಸು ಮೊದಲಾದ ಕಾರಣದಿಂದ ಈ ಬಾರಿ ಹಲವು ಹಿರಿಯ ನಾಯಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬರುತ್ತಿವೆ. ಆದರೆ, ಈ ಬಗ್ಗೆ ತಲೆಕೆಡಿಸಿಕೊಳ್ಳದ ಶಾಮನೂರು ಶಿವಶಂಕರಪ್ಪ ಪ್ರಚಾರವನ್ನು ಮುಂದುವರೆಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಮ್ಮ ಮನೆಬಾಗಿಲಿಗೇ ಟಿಕೆಟ್ ಕಳಿಸಲಿದೆ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದ್ದು, ಹೈಕಮಾಂಡ್ ನನಗೆ ಟಿಕೆಟ್ ಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...