alex Certify
ಕನ್ನಡ ದುನಿಯಾ       Mobile App
       

Kannada Duniya

ರೆಡಿಯಾಗ್ತಿದೆ ಅಭ್ಯರ್ಥಿಗಳ ಪಟ್ಟಿ, ಹೆಚ್ಚಾಗ್ತಿದೆ ಕುತೂಹಲ

ವಿಧಾನಸಭೆ ಚುನಾವಣೆ ದಿನ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಬಿರುಸುಗೊಂಡಿವೆ. ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ನಾಯಕರು ತಲೆಕೆಡಿಸಿಕೊಂಡಿದ್ದು, ಅಳೆದು ತೂಗಿ ಅಂತಿಮ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ನಿರತರಾಗಿದ್ದಾರೆ.

ವಿಧಾನಸಭೆ ಚುನಾವಣೆ ಘೋಷಣೆಗೂ ಮೊದಲೇ ಜೆ.ಡಿ.ಎಸ್. ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗಿದ್ದ ಶಾಸಕರೊಬ್ಬರು ಬಿ.ಜೆ.ಪಿ. ಸೇರಿದ್ದಾರೆ. ಉಳಿದಂತೆ ಈಗಾಗಲೇ ಘೋಷಿತ ಜೆ.ಡಿ.ಎಸ್. ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸಿದ್ದಾರೆ. ಪಕ್ಷದ ನಾಯಕರು ಕೂಡ ರಾಜ್ಯದೆಲ್ಲೆಡೆ ಪ್ರಚಾರ ನಡೆಸಿದ್ದು, 2 ನೇ ಪಟ್ಟಿ ಬಿಡುಗಡೆಗೆ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.

ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ನಾಯಕರು ಕೂಡ ಬಿರುಸಿನ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಕೆಲವು ಕ್ಷೇತ್ರಗಳಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.

ನಾಯಕರು ಅಳೆದು, ತೂಗಿ ಗೆಲುವನ್ನು ಮುಖ್ಯವಾಗಿಟ್ಟುಕೊಂಡು ಅಭ್ಯರ್ಥಿಗಳ ಪಟ್ಟಿಗೆ ಅಂತಿಮ ಟಚ್ ನೀಡುತ್ತಿದ್ದಾರೆ. ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಬಹಿರಂಗವಾಗಿದ್ದರೂ, ಪಕ್ಷದಿಂದ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ. ಆಕಾಂಕ್ಷಿಗಳು ಮತ್ತವರ ಬೆಂಬಲಿಗರಲ್ಲಿ ಕುತೂಹಲ ಹೆಚ್ಚಾಗಿದೆ. ಟಿಕೆಟ್ ಸಿಗದ ಕೆಲವರು ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಎಲ್ಲರ ಚಿತ್ತ ಬಿಡುಗಡೆಯಾಗಲಿರುವ ಅಭ್ಯರ್ಥಿಗಳ ಪಟ್ಟಿಯತ್ತ ನೆಟ್ಟಿದೆ. ಇದರೊಂದಿಗೆ ಚುನಾವಣೆ ಕಾವು ಏರತೊಡಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...