alex Certify
ಕನ್ನಡ ದುನಿಯಾ       Mobile App
       

Kannada Duniya

ರಾಷ್ಟ್ರೀಯ ಪಕ್ಷಗಳಿಗೆ ಶಾಕ್ ಕೊಟ್ಟ ಜೆ.ಡಿ.ಎಸ್.

ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರುವುದಿಲ್ಲ. ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ನಡುವೆ ಮೈತ್ರಿ ಸರ್ಕಾರ ರಚನೆಯ ಕುರಿತಾಗಿ ಮಾತುಗಳೂ ಕೇಳಿ ಬರುತ್ತಿವೆ.

ಮೈತ್ರಿ ಸರ್ಕಾರ ರಚನೆಯ ಕುರಿತಾಗಿ ಮಾತನಾಡಿದ ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡರು, ನಮಗೆ ಬಹುಮತ ಬರುತ್ತದೆ. ಬಹುಮತ ಬರದಿದ್ದರೆ, ಬಿ.ಜೆ.ಪಿ. ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಹೆಚ್.ಡಿ. ಕುಮಾರಸ್ವಾಮಿ ಬಿ.ಜೆ.ಪಿ.ಯೊಂದಿಗೆ ಕೈಜೋಡಿಸಿದರೆ, ಕುಮಾರಸ್ವಾಮಿಯನ್ನು ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗೌಡರು, ಒಂದು ವೇಳೆ ಕುಮಾರಸ್ವಾಮಿ ಬಿ.ಜೆ.ಪಿ. ಸಹಾಯ ಪಡೆದುಕೊಂಡರೆ, ಕುಟುಂಬದಿಂದ ಅವರನ್ನು ಬಹಿಷ್ಕರಿಸಲಾಗುವುದು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಬಂದ್ರೆ ನನ್ನ ಅನುಮತಿ ಅಗತ್ಯವೆಂದು ಅವರು ಹೇಳಿದ್ದಾರೆ. ಅತಂತ್ರ ಫಲಿತಾಂಶ ಬಂದ್ರೆ ವಿರೋಧ ಪಕ್ಷದಲ್ಲಿ ಕೂರುತ್ತೇವೆ ಎಂದು ಗೌಡರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಹೆಚ್.ಡಿ. ಕುಮಾರಸ್ವಾಮಿ, ಈ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಜೆ.ಡಿ.ಎಸ್. ಬಹುಮತ ಗಳಿಸಲಿದೆ. ಬಹುಮತ ಬರದಿದ್ದರೆ, ನಾವು ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸುತ್ತೇವೆ ಎಂದು ತಿಳಿಸಿದ್ದಾರೆ. ಅತಂತ್ರ ಫಲಿತಾಂಶ ಬಂದ್ರೆ ಕಾಂಗ್ರೆಸ್ ಅಥವಾ ಬಿ.ಜೆ.ಪಿ.ಗೆ ಬೆಂಬಲ ನೀಡುವುದಿಲ್ಲ. 2004 ರಲ್ಲಿ ಎರಡೂ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಪಾಠ ಕಲಿತಿದ್ದೇವೆ. ಖಂಡಿತವಾಗಿಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...