alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಬರೋಬ್ಬರಿ 1.5 ಕೋಟಿ ರೂ. ನಗದು ವಶ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಣದ ಹರಿವು ಹೆಚ್ಚಾಗ್ತಿದೆ. ಈಗಾಗಲೇ ಅನೇಕ ಕಡೆಗಳಲ್ಲಿ ಅಪಾರ ಪ್ರಮಾಣದ ನಗದನ್ನು ವಶಕ್ಕೆ ಪಡೆಯಲಾಗಿದೆ.

ಚುನಾವಣಾ ಆಯೋಗ, ಪೊಲೀಸರು ವಿವಿಧೆಡೆ ದಾಖಲೆ ಇಲ್ಲದ ನಗದು, ವಾಹನ ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ. ಇದೇ ಮೊದಲ ಬಾರಿಗೆ ಬೃಹತ್ ಮೊತ್ತದ ಹಣವನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ಎಸ್.ಜೆ. ಪಾರ್ಕ್ ಠಾಣೆ ಪೊಲೀಸರು ವಾಹನ ತಪಾಸಣೆ ವೇಳೆಯಲ್ಲಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಸುಭಾಷ್ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ. ಕಾರಿನಲ್ಲಿದ್ದ 1.5 ಕೋಟಿ ರೂ. ನಗದು ಜಫ್ತಿ ಮಾಡಲಾಗಿದೆ.

ರಾಯಚೂರಿನಿಂದ ಬೆಂಗಳೂರಿಗೆ ದಾಖಲೆ ಇಲ್ಲದೇ ಹಣ ಸಾಗಿಸುತ್ತಿರುವುದು ಕಂಡು ಬಂದಿದ್ದು, ಸೆಂಟ್ರಲ್ ಡಿ.ಸಿ.ಪಿ. ಚಂದ್ರಗುಪ್ತ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಕೊಮಾರನಹಳ್ಳಿ ಚೆಕ್ ಪೋಸ್ಟ್ ಬಳಿ ಸರ್ಕಾರಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ರಾಮನಗೌಡ ಎಂಬುವವರನ್ನು ವಶಕ್ಕೆ ಪಡೆದು, 9.96 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...