alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣಾ ಆಯೋಗಕ್ಕೆ ದೇವೇಗೌಡರ ದೂರು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಕುರಿತಾಗಿ ಮಾಜಿ ಪ್ರಧಾನಿ, ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ನೀತಿ ಸಂಹಿತೆ ಜಾರಿಯಲ್ಲಿದ್ರೂ, ನಿಗಮ ಮಂಡಳಿ ಅಧ್ಯಕ್ಷರು, ವಿವಿಧ ಇಲಾಖೆಗಳ ಸಲಹೆಗಾರರು ಅಧಿಕಾರ ಚಲಾಯಿಸುತ್ತಿದ್ದಾರೆ. ಇದನ್ನು ತಡೆಯಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ. ಅಲ್ಲದೇ, ಮಠ, ಮಂದಿರಗಳಿಗೆ ರಾಜಕೀಯ ನಾಯಕರು ಭೇಟಿ ನೀಡುತ್ತಿರುವ ಬಗ್ಗೆಯೂ ಆಕ್ಷೇಪಿಸಿದ್ದಾರೆ.

ತಮಗೆ ಬೇಕಾದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಗೃಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಣ ಸಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಯಲ್ಲಿ ಕೇಂದ್ರ ಚುನಾವಣಾ ಆಯುಕ್ತರನ್ನು ಗೌಡರು ಭೇಟಿ ಮಾಡಿದ್ದಾರೆ.

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಒ.ಪಿ. ರಾವತ್ ಅವರಿಗೆ ದೂರು ಸಲ್ಲಿಸಿ, ಚರ್ಚೆ ನಡೆಸಿದ್ದು, ನ್ಯಾಯಸಮ್ಮತ ಚುನಾವಣೆಗೆ ಕ್ರಮಕೈಗೊಳ್ಳಬೇಕೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...