alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ವಿರುದ್ಧ ಕಿಡಿ ಕಾರಿದ ಗೌಡರು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಜೆ.ಡಿ.ಎಸ್. ವತಿಯಿಂದ ಆಯೋಜಿಸಿದ್ದ ಬೃಹತ್ ಸಮಾವೇಶದಲ್ಲಿ ಪಕ್ಷದ ವರಿಷ್ಠ ಹೆಚ್.ಡಿ. ದೇವೇಗೌಡರು, ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೀವು ಬೆಳೆದ ಪಕ್ಷವನ್ನೇ ಮುಗಿಸಲು ಹೊರಟಿದ್ದೀರಲ್ಲಾ, ನಾನು ಏನು ದ್ರೋಹ ಮಾಡಿದ್ದೇನೆ. ರಾಹುಲ್ ಗಾಂಧಿ ಅವರ ಕೈಗೆ ಚೀಟಿ ಬರೆದುಕೊಟ್ಟು ನನ್ನನ್ನು ಸಂಘಪರಿವಾರಕ್ಕೆ ಹೋಲಿಕೆ ಮಾಡುತ್ತೀರಾ? ಎಂದು ದೇವೇಗೌಡರು ಕಿಡಿಕಾರಿದ್ದಾರೆ.

ಪಕ್ಷಕ್ಕೆ ದ್ರೋಹ ಮಾಡಿದವರಿಗೆ ವಿಧಾನಸಭೆ ಚುನಾವಣೆಯಲ್ಲಿ ಉತ್ತರಿಸುವ ಕಾಲ ಬಂದಿದೆ ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಚೆಲುವರಾಯಸ್ವಾಮಿ ಹಾಗೂ ಉಳಿದ ಶಾಸಕರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ನನಗೆ ಪುತ್ರನನ್ನು ಮುಖ್ಯಮಂತ್ರಿ ಮಾಡುವ ವ್ಯಾಮೋಹವಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಅವರನ್ನೇ ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರ ಮನೆ ಬಾಗಿಲಿಗೆ ಹೋಗಿದ್ದೆ. ಆದರೆ, ಬೆಳೆದ ಪಕ್ಷವನ್ನೇ ಸಿದ್ಧರಾಮಯ್ಯ ಮುಗಿಸಲು ಹೊರಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...