alex Certify
ಕನ್ನಡ ದುನಿಯಾ       Mobile App
       

Kannada Duniya

ಬಳ್ಳಾರಿಯಲ್ಲಿ ಜೆ.ಡಿ.ಎಸ್., ಧಾರವಾಡದಲ್ಲಿ ಬಿ.ಜೆ.ಪಿ.ಗೆ ಬಂಡಾಯದ ಬಿಸಿ

ವಿಧಾನಸಭೆ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗತೊಡಗಿದೆ. ಅಭ್ಯರ್ಥಿಗಳ ಘೋಷಣೆಯಾಗ್ತಿದ್ದಂತೆ ಆಕಾಂಕ್ಷಿಗಳ ಅಸಮಾಧಾನ ಸ್ಪೋಟಗೊಂಡಿದ್ದು, ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ತಯಾರಿ ನಡೆಸಿದ್ದಾರೆ.

ಈಗಾಗಲೇ ಅನೇಕ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳಾಗಿದ್ದವರು ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ನಗರ ಕ್ಷೇತ್ರದ ಜೆ.ಡಿ.ಎಸ್. ಟಿಕೆಟ್ ಆಕಾಂಕ್ಷಿಯಾಗಿದ್ದ ಕುಡುತಿನಿ ಶ್ರೀನಿವಾಸ್ ಅಸಮಾಧಾನಗೊಂಡಿದ್ದಾರೆ.

ಬಳ್ಳಾರಿಯಲ್ಲಿ ಆಯೋಜಿಸಿದ್ದ ವಿಕಾಸಪರ್ವ ಸಮಾವೇಶದ ವೇಳೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಇಕ್ಬಾಲ್ ಅಹಮ್ಮದ್ ಹೆಸರು ಘೋಷಿಸುತ್ತಿದ್ದಂತೆ ವೇದಿಕೆಯಲ್ಲಿದ್ದ ಕುಡುತಿನಿ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೇದಿಕೆಯಲ್ಲೇ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ ಶ್ರೀನಿವಾಸ್ ಟಿಕೆಟ್ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಿಂದ ಇಳಿದು ಬಂದಿದ್ದಾರೆ. ಟಿಕೆಟ್ ನೀಡುವ ಭರವಸೆ ನೀಡಿದ್ದ ಪಕ್ಷದ ನಾಯಕರು ಈಗ ಹಣ ಪಡೆದು ಬೇರೆಯವರಿಗೆ ಟಿಕೆಟ್ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಬಿ.ಜೆ.ಪಿ. ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮಾಜಿ ಶಾಸಕಿ ಸೀಮಾ ಮಸೂತಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. 2 ದಶಕದಿಂದ ಪಕ್ಷಕ್ಕಾಗಿ ದುಡಿದ ನನ್ನನ್ನು ಕಡೆಗಣಿಸಲಾಗಿದ್ದು, ಪಕ್ಷಾಂತರಿಗಳಿಗೆ ಮಣೆ ಹಾಕಲಾಗಿದೆ. ಕಾರ್ಯಕರ್ತರು, ಬೆಂಬಲಿಗರ ಒತ್ತಾಯದಂತೆ ಸ್ಪರ್ಧಿಸುವುದಾಗಿ ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...