alex Certify
ಕನ್ನಡ ದುನಿಯಾ       Mobile App
       

Kannada Duniya

ಬಾರ್ ಮಾಲೀಕರಿಗೆ ಬಿಗ್ ಶಾಕ್, 456 ಲೈಸೆನ್ಸ್ ಕ್ಯಾನ್ಸಲ್

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹಣ, ಮದ್ಯದ ಹೊಳೆ ಹರಿಯುತ್ತದೆ ಎಂಬುದು ತಿಳಿದ ವಿಚಾರವೇ. ಈ ಚುನಾವಣೆಯಲ್ಲಿಯೂ ಮದ್ಯದ ಹೊಳೆ ಹರಿಸಲಾಗುತ್ತಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ರಾಜ್ಯದಲ್ಲಿ 456 ಮದ್ಯದಂಗಡಿಗಳ ಲೈಸೆನ್ಸ್ ರದ್ದುಪಡಿಸಲಾಗಿದೆ.

ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದು, ವಿವಿಧೆಡೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಅದೇ ರೀತಿ ನೀತಿ ಸಂಹಿತೆ ಉಲ್ಲಂಘಿಸಿದ ಬಾರ್ ಲೈಸೆನ್ಸ್ ರದ್ದು ಮಾಡಲಾಗಿದೆ.

ಬೆಂಗಳೂರಿನಲ್ಲಿ 80 ಮದ್ಯದಂಗಡಿಗಳು ಸೇರಿದಂತೆ ರಾಜ್ಯಾದ್ಯಂತ 456 ಮದ್ಯದಂಗಡಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ. ಅಬಕಾರಿ ಇಲಾಖೆಯಿಂದ ನಿಯಮವನ್ನು ಉಲ್ಲಂಘಿಸುವ ಮದ್ಯದ ಅಂಗಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...