alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಮೋದಿ ಹವಾ: 4 ಸಮಾವೇಶದಲ್ಲಿ ಭಾಗಿ

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಪ್ರಧಾನಿ ಮೋದಿ ಇಂದು ಮತ್ತು ನಾಳೆ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಮೇ 1 ಮತ್ತು 3 ರಂದು ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದ ಮೋದಿ ಪ್ರತಿದಿನ 3 ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಇಂದು ಅವರು 4 ಸಮಾವೇಶಗಳಲ್ಲಿ ಭಾಗವಹಿಸಿ ಹವಾ ಸೃಷ್ಠಿಸಲಿದ್ದಾರೆ. ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮಿಸಲಿರುವ ಮೋದಿ ತುಮಕೂರು, ಗದಗ, ಶಿವಮೊಗ್ಗ, ಮಂಗಳೂರಿನಲ್ಲಿ ಇಂದು ಬಿ.ಜೆ.ಪಿ. ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಲಿದ್ದಾರೆ.

ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿರುವ ಅವರು, ನಾಳೆ ಚಿತ್ರದುರ್ಗದಿಂದ ಪ್ರಚಾರ ಆರಂಭಿಸಲಿದ್ದಾರೆ. ಹಿಂದಿನ ಪ್ರವಾಸದ ಸಂದರ್ಭದಲ್ಲಿ ಮೋದಿ ನೀಡಿದ್ದ ಸೀದಾರೂಪಯ್ಯ ಸರ್ಕಾರ, ದೇವೇಗೌಡರಿಗೆ ಗೌರವ, ಜೆ.ಡಿ.ಎಸ್. ಗೆ 3 ನೇ ಸ್ಥಾನ ಮೊದಲಾದ ಹೇಳಿಕೆಗಳು ಭಾರೀ ಚರ್ಚೆಗೆ ಒಳಗಾಗಿವೆ. ಇಂದಿನ ಪ್ರಚಾರ ಸಭೆಗಳಲ್ಲಿನ ಮೋದಿ ಭಾಷಣ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...