alex Certify
ಕನ್ನಡ ದುನಿಯಾ       Mobile App
       

Kannada Duniya

ಘಟಾನುಘಟಿ ನಾಯಕರಿಂದ ಇಂದು ನಾಮಪತ್ರ ಸಲ್ಲಿಕೆ

ವಿಧಾನಸಭೆ ಚುನಾವಣೆ ಅಖಾಡ ರಂಗೇರತೊಡಗಿದ್ದು, ವಿವಿಧ ಪಕ್ಷಗಳ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಬಿ.ಜೆ.ಪಿ. ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಇಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ನಾಮಪತ್ರ ಸಲ್ಲಿಸುವರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ನಾಮಪತ್ರ ಸಲ್ಲಿಸಲಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಮೊದಲಾದವರು ಭಾಗವಹಿಸಲಿದ್ದಾರೆ.

ಕನಕಪುರದಲ್ಲಿ ಸಚಿವ ಡಿ.ಕೆ. ಶಿವಕುಮಾರ್, ಹುಣಸೂರಿನಲ್ಲಿ ಹೆಚ್. ವಿಶ್ವನಾಥ್, ಅರಕಲಗೂಡಿನಲ್ಲಿ ಸಚಿವ ಎ. ಮಂಜು ಸೇರಿದಂತೆ ಹಲವಾರು ನಾಯಕರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದೇ ರೀತಿ, ಬಂಟ್ವಾಳದಿಂದ ರಮಾನಾಥ ರೈ, ಕಲಘಟಗಿಯಿಂದ ಸಂತೋಷ್ ಲಾಡ್ ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 24 ರ ವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...