alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ಚುನಾವಣಾ ಕಣ: ಇಂದು ರಾಹುಲ್, ನಾಳೆಯಿಂದ ಅಮಿತ್ ಶಾ ಪ್ರಚಾರ

ವಿಧಾನಸಭೆ ಚುನಾವಣೆ ಪ್ರಚಾರದ ಭರಾಟೆ ಮತ್ತೆ ಜೋರಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಅಧ್ಯಕ್ಷರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಇಂದಿನಿಂದ ಕರಾವಳಿ ಭಾಗದಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ನಲ್ಲಿ ಅಂಕೋಲಾಕ್ಕೆ ಆಗಮಿಸಲಿರುವ ಅವರು, ಮಧ್ಯಾಹ್ನ 12.30 ರಿಂದ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕುಮಟಾ ತಾಲ್ಲೂಕಿನಲ್ಲಿ ರೋಡ್ ಶೋ ನಡೆಸಿ ಕುಮಟಾದ ಮಾಸ್ತಿಕಟ್ಟೆ ಸರ್ಕಲ್ ನಲ್ಲಿ ಭಾಷಣ ಮಾಡುವರು. ಸಂಜೆ 4 ಗಂಟೆಗೆ ಹೊನ್ನಾವರದಲ್ಲಿ, ಭಟ್ಕಳದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮುರ್ಡೇಶ್ವರದಲ್ಲಿ ವಾಸ್ತವ್ಯ ಹೂಡಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಏಪ್ರಿಲ್ 27 ರಿಂದ 4 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಬಳ್ಳಾರಿ, ಬಾಗಲಕೋಟೆ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಪಕ್ಷದ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ. ಕಾರ್ಯಕರ್ತರೊಂದಿಗೆ, ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...