alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಹೊಸ್ತಿಲಲ್ಲೇ ಸಿ.ಎಂ.ಗೆ ಬಿಗ್ ಶಾಕ್…!

ಮೈಸೂರು: ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿನ್ನಡೆಯಾಗಿದೆ. ವರುಣಾ ಕ್ಷೇತ್ರದ ಪ್ರಭಾವಿ ಮುಖಂಡ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಎಲ್. ರೇವಣಸಿದ್ಧಯ್ಯ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.

ನಿನ್ನೆಯೇ ಕಾಂಗ್ರೆಸ್ ತೊರೆದಿರುವ ರೇವಣಸಿದ್ಧಯ್ಯ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ನನಗೆ ಕಾಂಗ್ರೆಸ್ ಪಕ್ಷದೊಂದಿಗೆ ಯಾವುದೇ ವಿರೋಧವಿಲ್ಲ. ಮುಖ್ಯಮಂತ್ರಿ ಸಿದ್ಧರಾಮಯ್ಯ ನನ್ನನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿದ್ಧರಾಮಯ್ಯ ಸರಿಯಾಗಿ ನಡೆಸಿಕೊಳ್ಳದೇ ತಮ್ಮನ್ನು ಕಡೆಗಣಿಸಿದ್ದು, ಈಗ ಬಿಸ್ಕೆಟ್ ಹಾಕಲು ಬಂದಿದ್ದರು ಎಂದು ರೇವಣಸಿದ್ಧಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಕಾಂಗ್ರೆಸ್ ತೊರೆದಿದ್ದೇನೆ. ಯಾವ ಪಕ್ಷವನ್ನೂ ಸೇರುವುದಿಲ್ಲ. ಈ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರನ್ನು ಬೆಂಬಲಿಸುತ್ತೇನೆ. ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ.ಯನ್ನು ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...