alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಮೀಕ್ಷೆ ಶುದ್ಧ ಸುಳ್ಳು, ಜೆ.ಡಿ.ಎಸ್. ಅಧಿಕಾರಕ್ಕೆ’

ಹುಬ್ಬಳ್ಳಿ: ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಸುಳ್ಳು. ಅದರ ಬಗ್ಗೆ ನಂಬಿಕೆ ಇಲ್ಲ. ರಾಜ್ಯದಲ್ಲಿ ಜೆ.ಡಿ.ಎಸ್. ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಸದಸ್ಯ, ಜೆ.ಡಿ.ಎಸ್. ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಎ. ಶರವಣ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆ.ಡಿ.ಎಸ್. ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗಲಿದೆ. ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂಡಿಯಾ ಟುಡೇ ನಡೆಸಿದ ಸಮೀಕ್ಷೆ ಶುದ್ಧ ಸುಳ್ಳಿನ ಸಮೀಕ್ಷೆಯಾಗಿದೆ. ರಾಜ್ಯದಲ್ಲಿ ಜೆ.ಡಿ.ಎಸ್. ಪರವಾದ ಅಲೆ ಇದ್ದು, ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ಹೇಳಿದ್ದಾರೆ.

ಇಂಡಿಯಾ ಟುಡೇ ನಡೆಸಿದ ಮತದಾನ ಪೂರ್ವ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೂ ಬಹುಮತವಿಲ್ಲ, ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಹೇಳಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...