alex Certify
ಕನ್ನಡ ದುನಿಯಾ       Mobile App
       

Kannada Duniya

ಬಳ್ಳಾರಿಯಲ್ಲಿ ಶ್ರೀರಾಮುಲು ಸ್ಪರ್ಧೆ, ಆಪ್ತನೇ ಎದುರಾಳಿ

ಬಿ.ಎಸ್. ಯಡಿಯೂರಪ್ಪ ಹೊರತುಪಡಿಸಿ ಬೇರೆ ಸಂಸದರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡದಿರಲು ಚಿಂತಿಸಿದ್ದ ಬಿ.ಜೆ.ಪಿ. ನಾಯಕರು, ಸಂಸದ ಶ್ರೀರಾಮುಲು ಅವರಿಗೆ ಟಿಕೆಟ್ ನೀಡಲಿದ್ದಾರೆ.

ಬಳ್ಳಾರಿ ಗ್ರಾಮಾಂತರ, ಸಂಡೂರು, ಕೂಡ್ಲಿಗಿ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಿಂದ ಶ್ರೀರಾಮುಲು ಸ್ಪರ್ಧಿಸುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ್ದ ಅವರ ಆಪ್ತ ನಾಗೇಂದ್ರ, ಶ್ರೀರಾಮುಲು ಅವರಿಗೆ ಸ್ಪರ್ಧಿಯಾಗುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ ಶ್ರೀರಾಮುಲು ಸ್ಪರ್ಧಿಸುವುದರಿಂದ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ಬಿ.ಜೆ.ಪಿ. ನಾಯಕರ ಲೆಕ್ಕಾಚಾರವಾಗಿದ್ದು, ಬಹುತೇಕ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧಿಸುವುದು ಖಚಿತವಾಗಿದೆ.

ನಾಗೇಂದ್ರ ಅವರಿಗೆ ಇದೇ ಕ್ಷೇತ್ರದಿಂದ ಕಣಕ್ಕಿಳಿಯುವಂತೆ ಪಕ್ಷದ ನಾಯಕರು ಸೂಚನೆ ನೀಡಿದ್ದಾರೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಮತ್ತು ನಾಗೇಂದ್ರ ಮುಖಾಮುಖಿಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...