alex Certify
ಕನ್ನಡ ದುನಿಯಾ       Mobile App
       

Kannada Duniya

1985 ರ ಬಳಿಕ ಯಾವ ಪಕ್ಷವೂ ಮರಳಿ ಅಧಿಕಾರಕ್ಕೆ ಬಂದಿಲ್ಲ…!

ಕರ್ನಾಟಕದ ವಿಧಾನಸಭೆ ಚುನಾವಣೆಗೆ ಮೇ 12 ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷವೇ ಅಧಿಕಾರ ನಡೆಸಿದೆ. 1985 ರ ಬಳಿಕ ರಾಜ್ಯದಲ್ಲಿ ಯಾವ ಪಕ್ಷ ಕೂಡ ಮರಳಿ ಅಧಿಕಾರಕ್ಕೆ ಬಂದಿಲ್ಲ. ಇದಕ್ಕೆ ಆಡಳಿತ ವಿರೋಧಿ ಅಲೆ ಸೇರಿದಂತೆ ಹಲವು ಕಾರಣಗಳಿರಬಹುದು.

1983 ರಲ್ಲಿ ಕರ್ನಾಟಕ ವಿಧಾನಸಭೆಯ 7 ನೇ ಚುನಾವಣೆ ನಡೆದಿದ್ದು, ಜನತಾ ಪಕ್ಷ ಆಡಳಿತಕ್ಕೆ ಬಂದು ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದರು. 1985 ರಲ್ಲಿ ಜನತಾಪಕ್ಷ ಪುನಃ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿಯಾಗಿ ರಾಮಕೃಷ್ಣ ಹೆಗ್ಡೆ ಮುದುವರೆದಿದ್ದರು.

ಅದಾಗಿ 30 ವರ್ಷಗಳ ಬಳಿಕ ರಾಜ್ಯದಲ್ಲಿ 15 ನೇ ವಿಧಾನಸಭೆ ಚುನಾವಣೆ ನಡೆಯುತ್ತಿದೆ. 30 ವರ್ಷಗಳಲ್ಲಿ ಆಡಳಿತ ವಿರೋಧಿ ಅಲೆಯಿಂದಾಗಿ ರಾಜ್ಯದಲ್ಲಿ ಯಾವ ಪಕ್ಷವೂ ಮರಳಿ ಅಧಿಕಾರಕ್ಕೆ ಬಂದಿಲ್ಲ. 2004 ರ 12 ನೇ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಬಾರದೇ ಕಾಂಗ್ರೆಸ್–ಜೆ.ಡಿ.ಎಸ್.(ಧರಂಸಿಂಗ್ ಮುಖ್ಯಮಂತ್ರಿ), ಜೆ.ಡಿ.ಎಸ್.–ಬಿ.ಜೆ.ಪಿ.,(ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ) ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಬಳಿಕ 2007 ರಲ್ಲಿ ಬಿ.ಎಸ್. ಯಡಿಯೂರಪ್ಪ ಕೆಲವೇ ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದರು. 2008 ರಲ್ಲಿ ನಡೆದ 13 ನೇ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅಧಿಕಾರಕ್ಕೆ ಬಂದು ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿದ್ದರು.

2013 ರಲ್ಲಿ ನಡೆದ 14 ನೇ ವಿಧಾನಸಭೆ ಚುನಾವಣೆಯಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಈ ಅವಧಿಯಲ್ಲಿ ರಾಮಕೃಷ್ಣ ಹೆಗ್ಡೆ ಬಳಿಕ ಮತ್ತೆ ಯಾರೂ 2 ನೇ ಅವಧಿಗೆ ಮುಖ್ಯಮಂತ್ರಿಯಾಗಿಲ್ಲ. 3 ದಶಕದಿಂದ ಆಡಳಿತಾರೂಢ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಕಾಂಗ್ರೆಸ್ ಗೆ ಆಡಳಿತ ವಿರೋಧಿ ಅಲೆ ಇದೆಯೇ? ಇಲ್ಲವೇ? ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...