alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ಅಭಿಮಾನಿಗಳಿಗೆ ಸಿಗುತ್ತಾ ಗುಡ್ ನ್ಯೂಸ್…?

ಬಳ್ಳಾರಿ: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯದೊಂದಿಗೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿರುವ ಬಿ.ಜೆ.ಪಿ. ನಾಯಕರು, ಸಂಸದ ಬಿ. ಶ್ರೀರಾಮುಲು ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಬದಲಿಗೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀರಾಮುಲು ಅವರನ್ನು ಘೋಷಿಸಲಾಗಿದೆ.

ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರೂ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಈ ನಡುವೆ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗುವುದು ಎಂಬ ಮಾತುಗಳು ಹರಿದಾಡುತ್ತಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ಮೊಳಕಾಲ್ಮೂರು ಕ್ಷೇತ್ರದಲ್ಲಿ ತಾವು ಸ್ಪರ್ಧಿಸುವುದರಿಂದ ಅನುಕೂಲವಾಗಲಿದೆ ಎಂಬುದು ಪಕ್ಷದ ನಾಯಕರ ತೀರ್ಮಾನವಾಗಿರಬಹುದು. ಪಕ್ಷದ ಸೂಚನೆಯಂತೆ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷ ಅಧಿಕಾರಕ್ಕೆ ಬರಬೇಕು. ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕೆಂಬುದು ನಮ್ಮ ಅಪೇಕ್ಷೆಯಾಗಿದೆ. ಶಾಸಕ ತಿಪ್ಪೇಸ್ವಾಮಿ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗುವುದು. ನನಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡುವ ಬಗ್ಗೆ ತಿಳಿದಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ಪಕ್ಷ ವಹಿಸಿದ ಜವಾಬ್ದಾರಿ ನಿಭಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...