alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾನಕ್ಕೆ 3 ದಿನವಿರುವಾಗ ಬಯಲಾಯ್ತು ಭಾರೀ ಸಂಚು

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆಯದಂತೆ ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದೆ. ಹೀಗಿದ್ದರೂ ಕೂಡ ಗೆಲುವಿಗೆ ಹೇಗೆಲ್ಲಾ ಅಕ್ರಮ ನಡೆಸಲಾಗುತ್ತದೆ ಎಂಬ ರಹಸ್ಯ ಬಯಲಾಗಿದೆ.

ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿರುವ ಚುನಾವಣಾ ವಿಚಕ್ಷಣ ದಳದ ಅಧಿಕಾರಿಗಳು ಬರೋಬ್ಬರಿ 15,000 ಮತದಾರರ ನಕಲಿ ಗುರುತಿನ ಚೀಟಿ ವಶಪಡಿಸಿಕೊಂಡಿದ್ದಾರೆ.

ರಾಜರಾಜೇಶ್ವರಿ ನಗರಕ್ಕೆ ಸೇರಿದ ಆರೋಪಿಗಳು ಸಾರ್ವಜನಿಕರಿಗೆ ನಕಲಿ ಗುರುತಿನ ಚೀಟಿ ಮಾಡಿಕೊಡುತ್ತಿದ್ದರು. ಕೆಲವರನ್ನು ಬೆದರಿಸಿ ಗುರುತಿನ ಚೀಟಿ ಪಡೆದುಕೊಂಡಿದ್ದರು. ಮತದಾರರನ್ನು ಬೆದರಿಸಿ ನಕಲಿ ಗುರುತಿನ ಚೀಟಿ ಮೂಲಕ ಮತ ಹಾಕಿಸುವ ಸಂಚು ರೂಪಿಸಿದ್ದರು ಎನ್ನಲಾಗಿದೆ.

ಜಾಲಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಾಗೂ ಚುನಾವಣಾಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಮತದಾರರ ನಕಲಿ ಗುರುತಿನ ಚೀಟಿ ಪತ್ತೆಯಾದ ಹಿನ್ನಲೆಯಲ್ಲಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿ.ಜೆ.ಪಿ. ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...