alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಂಗ್ರೆಸ್ ಪರ ಕೆಲಸ ಮಾಡಿದ ಅಧಿಕಾರಿ ಎತ್ತಂಗಡಿ

ಗದಗ : ಕಾಂಗ್ರೆಸ್ ಪಕ್ಷದ ಹಾಗೂ ಸಚಿವ ಹೆಚ್.ಕೆ. ಪಾಟೀಲ್ ಪರವಾಗಿ ಗದಗ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಬಿ.ಜೆ.ಪಿ. ಮುಖಂಡ ಅನಿಲ್ ಮೆಣಸಿನಕಾಯಿ ಆರೋಪಿಸಿದ್ದು, ಇದರ ಬೆನ್ನಲ್ಲೇ ಉಪ ವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ನೀತಿ ಸಂಹಿತೆ ಜಾರಿಯಾಗಿದ್ದರೂ, ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಜುನಾಥ್ ಅವರು, ಸಚಿವ ಹೆಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಕಚೇರಿಗೂ ಭೇಟಿ ನೀಡಿದ್ದು, ಅವರನ್ನು ವರ್ಗಾವಣೆ ಮಾಡಬೇಕೆಂದು ಅನಿಲ್ ಮೆಣಸಿನಕಾಯಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅದರಂತೆ ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಗೀತಾ ಕೌಲಗಿ ಅವರನ್ನು ನೇಮಕ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...