alex Certify
ಕನ್ನಡ ದುನಿಯಾ       Mobile App
       

Kannada Duniya

‘ಗೌಡರನ್ನು ಗೌರವಿಸುತ್ತೇನೆ, ಅವರ ನೆರವು ಬೇಡ’

ಹಾಸನ: ದೇಶದ ವರಿಷ್ಠ ನಾಯಕರಲ್ಲಿ ಒಬ್ಬರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುರಿತಾಗಿ ಕಾಂಗ್ರೆಸ್ ನಾಯಕರು ವ್ಯಂಗ್ಯವಾಗಿ ಮಾತನಾಡಿ ಅವಮಾನಿಸಿದ್ದಾರೆ ಎಂದು ಉಡುಪಿಯಲ್ಲಿ ನಡೆದ ಬಿ.ಜೆ.ಪಿ. ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ ನೀಡಿದ ಈ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಅವರು ಜೆ.ಡಿ.ಎಸ್.ನೊಂದಿಗೆ ಮೈತ್ರಿಗೆ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಇದೇ ವೇಳೆ ಹಾಸನದಲ್ಲಿ ಮಾತನಾಡಿದ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನಮಗೆ ಗೌಡರ ನೆರವು ಬೇಕಿಲ್ಲ ಎಂದು ಹೇಳಿದ್ದಾರೆ.

ಅರಕಲಗೂಡಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇದು ದೇವೇಗೌಡರ ಊರಾಗಿದೆ. ನಾನು ಅವರನ್ನು ಗೌರವದಿಂದ ಕಾಣುತ್ತೇನೆ. ಆದರೆ, ಅವರಿಗೆ ಕಾಂಗ್ರೆಸ್ ಸೋಲಿಸುವ ಶಕ್ತಿ ಇದೆಯಾ? ನಮಗೆ ಗೌಡರ ನೆರವು ಬೇಕಿಲ್ಲ. ನಮ್ಮ ಪಕ್ಷವೇ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...