alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವು

aac-ctd-sirasi

ಚಿತ್ರದುರ್ಗ: ಟಾಟಾ ವೆಂಚರ್, ಟಾಟಾ ಮ್ಯಾಜಿಕ್ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ, ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಐಮಂಗಲ ಸಮೀಪ, ರಾಷ್ಟ್ರೀಯ ಹೆದ್ದಾರಿ 4 ರ ಸರ್ವೀಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಶಿರಸಿಯ ನಸರುಲ್ಲಾ(40), ಟಿಪ್ಪುಸಾಬ್(45) ಮೃತಪಟ್ಟವರು. ಶಿರಸಿಯಿಂದ ತುಮಕೂರಿಗೆ ಸಂಬಂಧಿಕರೊಬ್ಬರ ಶವ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಸಂದರ್ಭದಲ್ಲಿ ವಾಹನ ಅಪಘಾತಕ್ಕೀಡಾಗಿದೆ.

ವಾಹನದಲ್ಲಿದ್ದ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...