alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರದ ವೇಳೆ ಗಾಯಗೊಂಡಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನಿಧನ

ಧಾರವಾಡ: ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಚಕ್ಕಡಿಯಿಂದ ಬಿದ್ದು ಗಾಯಗೊಂಡಿದ್ದ ಧಾರವಾಡ–ಹುಬ್ಬಳ್ಳಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ವಿ. ಮಾಡಳ್ಳಿ ನಿಧನರಾಗಿದ್ದಾರೆ.

ನವಲಗುಂದ ತಾಲ್ಲೂಕಿನ ಶಲವಡಿ ಗ್ರಾಮದಲ್ಲಿ ಚಕ್ಕಡಿಯಲ್ಲಿ ನಿಂತು ಪ್ರಚಾರ ಮಾಡುವ ಸಂದರ್ಭದಲ್ಲಿ ಅವರು ಆಯತಪ್ಪಿ ಬಿದ್ದಿದ್ದು, ತಲೆಗೆ ತೀವ್ರವಾದ ಪೆಟ್ಟಾಗಿತ್ತು. ಕೂಡಲೇ ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರ ನಡೆಸುವಾಗ ಈ ಅವಘಡ ಸಂಭವಿಸಿತ್ತು. 2 ದಿನಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಾಡಳ್ಳಿ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...