alex Certify
ಕನ್ನಡ ದುನಿಯಾ       Mobile App
       

Kannada Duniya

ದಿಢೀರ್ ನಾಪತ್ತೆಯಾಗಿದ್ದ ಅಭ್ಯರ್ಥಿ ಠಾಣೆಗೆ ಹಾಜರ್

ಶಿವಮೊಗ್ಗ: ಕಳೆದ 4 ದಿನಗಳಿಂದ ನಾಪತ್ತೆಯಾಗಿದ್ದ ಸೊರಬ ವಿಧಾನಸಭೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ಹುಣವಳ್ಳಿ ಗಂಗಾಧರಪ್ಪ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

ಸೊರಬ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ಅವರು ನಿರತರಾಗಿದ್ದರು. ಬೆಂಬಲಿಗರೊಂದಿಗೆ ಪ್ರಚಾರ ನಡೆಸಿದ್ದ ಅವರು ಏಕಾಏಕಿ ನಾಪತ್ತೆಯಾಗಿದ್ದು, ಗೊಂದಲಕ್ಕೆ ಕಾರಣವಾಗಿತ್ತು. ಪಕ್ಷದ ಮುಖಂಡರು ಸೊರಬ ಠಾಣೆಗೆ ದೂರು ನೀಡಿದ್ದರು.

ಪೊಲೀಸರು ತನಿಖೆ ನಡೆಸಿದ್ದು, ಸಂಬಂಧಿಕರ ಮನೆಗೆ ಹೋಗಿದ್ದಾಗಿ ಕುಟುಂಬದವರು ಮಾಹಿತಿ ನೀಡಿದ್ದಾರೆ. ಈ ಬೆಳವಣಿಗೆಗಳ ನಂತರ ಹುಣವಳ್ಳಿ ಗಂಗಾಧರಪ್ಪ ಠಾಣೆಗೆ ಹಾಜರಾಗಿ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ತಾವು ಕಾರಣಾಂತರದಿಂದ ಸಂಬಂಧಿಕರ ಮನೆಗೆ ಹೋಗಿದ್ದು, ಮತ್ತೆ ಪ್ರಚಾರದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...