alex Certify
ಕನ್ನಡ ದುನಿಯಾ       Mobile App
       

Kannada Duniya

ಜೋಲಾರ್ ಪೇಟ್ ಬಳಿ ಹಳಿ ತಪ್ಪಿದ ರೈಲು

TRAIN

ಬೆಂಗಳೂರು-ಕನ್ಯಾಕುಮಾರಿ ನಡುವೆ ಸಂಚರಿಸುವ ಕನ್ಯಾಕುಮಾರಿ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ತಮಿಳುನಾಡಿನ ಜೋಲಾರ್ ಪೇಟ್ ಬಳಿ ನಡೆದಿದೆ.

ಬೆಳಗಿನ ಜಾವ 4 ಗಂಟೆ ಸುಮಾರಿಗೆ ಜೋಲಾರ್ ಪೇಟ್ ಸಮೀಪ ಬರುತ್ತಿದ್ದ ಸಂದರ್ಭದಲ್ಲಿ ಹಳಿತಪ್ಪಿದ್ದು, 4-5 ಬೋಗಿಗಳು ಪಲ್ಟಿಯಾಗಿವೆ. ಅದರಲ್ಲಿ ಒಂದು ಬೋಗಿ ಸಂಪೂರ್ಣ ಜಖಂಗೊಂಡಿದೆ ಎಂದು ಹೇಳಲಾಗಿದೆ. ಬೆಳಗಿನ ಜಾವದ ನಿದ್ದೆಯಲ್ಲಿದ್ದ ಪ್ರಯಾಣಿಕರು ಹಳಿತಪ್ಪಿ ರೈಲು ವಾಲುತ್ತಿದ್ದಂತೆ ಇಳಿದು ಪಾರಾಗಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಹತ್ತಿರದ ಹಾಗೂ ಬೆಂಗಳೂರಿನ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ರೈಲ್ವೇ ರಕ್ಷಣಾದಳದ ಸಿಬ್ಬಂದಿ, ಪೊಲೀಸರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.

ರೈಲು ಹಳಿತಪ್ಪಿದ ಕಾರಣ ಈ ಮಾರ್ಗದಲ್ಲಿ ಸಂಚರಿಸುವ ಇತರೆ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಅಲ್ಲದೇ, ಪ್ರಯಾಣಿಕರಿಗೆ ಬಸ್ ಗಳ ಮೂಲಕ ಕಳುಹಿಸಲಾಗಿದ್ದು, ಸರಿಪಡಿಸುವ ಕಾರ್ಯ ಆರಂಭಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...