alex Certify
ಕನ್ನಡ ದುನಿಯಾ       Mobile App
       

Kannada Duniya

ಯಾರಾಗ್ತಾರೆ ಗುಜರಾತ್ ಸಿಎಂ?

amitshah1

ರಾಜಕೀಯ ನಾಯಕರ ಚಿತ್ತ ಗುಜರಾತ್ ನತ್ತ ನೆಟ್ಟಿದೆ. ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಆಯ್ಕೆ ನಡೆಯಲಿದೆ. ಗಾಂಧಿನಗರದಲ್ಲಿ ನಾಲ್ಕು ಗಂಟೆಗೆ ನಡೆಯಲಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು.

ಸಭೆಯಲ್ಲಿ ನಿತಿನ್ ಗಡ್ಕರಿ ಹಾಗೂ ಸರೋಜ್ ಪಾಂಡೆ ಪಾಲ್ಗೊಳ್ಳಲಿದ್ದಾರೆ. ಅಮಿತ್ ಶಾ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ರಾಜ್ಯದ ಬಿಜೆಪಿ ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ರಾಜ್ಯ ಸಚಿವ ನಿತಿನ್ ಪಟೇಲ್ ಗೆ ಮುಖ್ಯಮಂತ್ರಿ ಪಟ್ಟ ಸಿಗುವ ಸಾಧ್ಯತೆ ಇದೆ. ರಾಜ್ಯಾಧ್ಯಕ್ಷ ವಿಜಯ್ ರುಪಾನಿ ಸೇರಿದಂತೆ ಇನ್ನೂ ಕೆಲವು ನಾಯಕರ ಹೆಸರು ಕೇಳಿ ಬರ್ತಿದೆ. ಆದ್ರೆ ಯಾರು ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಳ್ತಾರೆಂಬುದು ಸಭೆ ನಂತ್ರವೇ ಹೊರಬರಲಿದೆ.

ನವೆಂಬರ್ ತಿಂಗಳಲ್ಲಿ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ತೆರವುಗೊಳಿಸುವಂತೆ ಆನಂದಿ ಬೆನ್ ಪಟೇಲ್ ಪಕ್ಷಾಧ್ಯಕ್ಷ ಅಮಿತ್ ಶಾಗೆ ಮನವಿ ಸಲ್ಲಿಸಿದ್ದರು. ಎರಡು ದಿನಗಳ ಹಿಂದೆ ಅಮಿತ್ ಶಾ ಆನಂದಿಬೆನ್ ರಾಜೀನಾಮೆಯನ್ನು ಸ್ವೀಕರಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...