alex Certify
ಕನ್ನಡ ದುನಿಯಾ       Mobile App
       

Kannada Duniya

ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

hyder-kattada

ಹೈದರಾಬಾದ್: ನಿರ್ಮಾಣ ಹಂತದ ಕಟ್ಟಡ ಕುಸಿದು, ಒಬ್ಬರು ಸಾವು ಕಂಡಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್ ನ ನಾನಕ್ ರಾಮ್ ಗುಡಾ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು, ಕಟ್ಟಡದ ಅವಶೇಷಗಳಡಿ 10 ಕ್ಕೂ ಅಧಿಕ ಮಂದಿ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅವಶೇಷಗಳ ಅಡಿಯಿಂದ ಗಾಯಗೊಂಡಿದ್ದ ಬಾಲಕಿ ಹಾಗೂ ಮಹಿಳೆಯನ್ನು ರಕ್ಷಿಸಲಾಗಿದೆ. ಸತ್ಯನಾರಾಯಣ ಸಿಂಗ್ ಎಂಬುವವರಿಗೆ ಸೇರಿದ ಕಟ್ಡಡ ಇದಾಗಿದ್ದು, ನಿನ್ನೆ ರಾತ್ರಿ ದಿಢೀರ್ ಕುಸಿದಿದೆ. ಎನ್.ಡಿ.ಆರ್.ಎಫ್. ಸಿಬ್ಬಂದಿ, ಪೊಲೀಸರು, ಅಗ್ನಿಶಾಮಕ ಮತ್ತು ತುರ್ತು ಸೇವೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಆರ್. ಅವರು, ಗೃಹಸಚಿವ ಎನ್. ರೆಡ್ಡಿ ಅವರಿಂದ ಮಾಹಿತಿ ಪಡೆದುಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...