alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀನಗರದಲ್ಲಿ ಮತ್ತೆ ಉಗ್ರರ ಅಟ್ಟಹಾಸ

srina

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ, ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನೆಯ ವಾಹನಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಶ್ರೀನಗರ ಹೊರ ವಲಯದಲ್ಲಿರುವ ಝಕುರಾದಲ್ಲಿನ ಇಂಡಸ್ಟ್ರಿಯಲ್ ಎಸ್ಟೇಟ್ ಬಿಲ್ಡಿಂಗ್ ಬಳಿ ಸೌರಾಷ್ಟ್ರ ಸೀಮಾ ಬಲ (ಎಸ್.ಎಸ್.ಬಿ.) ಸೈನಿಕರು ವಾಹನದಲ್ಲಿ ತೆರಳುವಾಗ, ಭಯೋತ್ಪಾದಕರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.

ಇದರಿಂದಾಗಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. 8 ಮಂದಿ ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸೇನೆಯಿಂದಲೂ ಪ್ರತಿ ದಾಳಿ ನಡೆಸಲಾಗಿದೆ. ಉಗ್ರರು ಮತ್ತು ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯ ಬಳಿಕ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಯೋಧರು ತೆರಳಿದ್ದು, ಭಯೋತ್ಪಾದಕರನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...